UN networks
ಉಳ್ಳಾಲ: ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಹಿಂದೂ ಸಮಾಜದ ಐಕ್ಯತೆಗೆ ಮತ್ತು ಲೋಕಕಲ್ಯಾಣಾರ್ಥವಾಗಿ ಹಾಗೂ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ದುಷ್ಕøತ್ಯ ಎಸಗಿದ ಆರೋಪಿಗಳ ಬಂಧನವನ್ನು ನೆನಪಿಸುವ ಹಾಗೂ ಇಂತಹ ಕೃತ್ಯಗಳ ವಿರುದ್ಧ ಜಾಗೃತ ಮೂಡಿಸುವ ನಿಟ್ಟಿನಲ್ಲಿ ಮಾ.19 ರಂದು ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಿಂದ ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ ` ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ‘ ನಡೆಯಲಿದೆ ಎಂದು ವಿ.ಹಿಂ.ಪ ಉಳ್ಳಾಲ ಪ್ರಖಂಡದ ಅಧ್ಯಕ್ಷ ಬಿ.ನಾರಾಯಣ್ ಕುಂಪಲ ಹೇಳಿದರು.
ತೊಕ್ಕೊಟ್ಟು ಪ್ರೆಸ್‍ಕ್ಲಬ್‍ನಲ್ಲಿ ಶುಕ್ರವಾರ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಳೆದ ಎರಡು ವರ್ಷಗಳ ಹಿಂದೆ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿದ ಸಂದರ್ಭದಲ್ಲಿ ಪಾದಯಾತ್ರೆ ನಡೆಸುವುದರ ಮೂಲಕ ದೈವ , ದೇವರುಗಳ ಬಗ್ಗೆ ಭಕ್ತಿ ಶ್ರದ್ಧೆ ಮೂಡಿಸುವ ಪವಿತ್ರ ಕಾರ್ಯವನ್ನು ವಿ.ಹಿಂ.ಪ ಮಾಡಿತ್ತು. ಪಾದಯಾತ್ರೆಯ ಫಲವಾಗಿ ಪೊಲೀಸ್ ಇಲಾಖೆ ತಕ್ಷಣ ಕಾರ್ಯಪ್ರವೃತ್ತರಾಗಿ ತಪ್ಪಿತಸ್ಥರನ್ನು ಬಂಧಿಸುವ ಕಾರ್ಯವನ್ನು ಮಾಡಿತ್ತು. ಇಂತಹ ದುಷ್ಕøತ್ಯಗಳು ಮುಂದೆಂದೂ ನಡೆಯಬಾರದು ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾ.19 ರಂದು ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಿಂದ ಬೆಳಿಗ್ಗೆ 6 ಗಂಟೆಗೆ ಸಾಮೂಹಿಕ ಸಂಕಲ್ಪ ಪ್ರಾರ್ಥನೆಯೊಂದಿಗೆ ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಲ್ಲರೂ ಸಕುಟುಂಬರಾಗಿ ಭಾಗವಹಿಸುವಂತೆ ವಿನಂತಿಸುವುದರ ಜೊತೆಗೆ ಸಮಾಪನದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿ.ಹಿಂ.ಪ ಮುಖಂಡ ಪ್ರೊ.ಎಂ.ಬಿ. ಪುರಾಣಿಕ್ ಪ್ರವಚನ ನೀಡಲಿದ್ದಾರೆ ಎಂದರು.
ಈ ಸಂದರ್ಭ ಬಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು, ವಿ.ಹಿಂ.ಪ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರವೀಣ್ ಕುತ್ತಾರ್ ಉಪಸ್ಥಿತರಿದ್ದರು.